ಕೊರೊನಾ ಮಹಾಮಾರಿಯಿಂದಾಗಿ ಕಳೆದ ವರ್ಷ ಅಯ್ಯಪ್ಪನ ದರ್ಶನಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ, ಈ ವರ್ಷ ಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ.
ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದಾಗಿ ಅಯ್ಯಪ್ಪನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಕ್ತರಿಗೆ ಪಂಪಾದಿಂದ ನೀಲಿಮಲ ಮಾರ್ಗವಾಗಿ ತೆರಳಲು ಅವಕಾಶ ನೀಡಲಾಗಿದೆ.
ಈ ಕುರಿತು ಕೇರಳ ಸಿಎಂ ಕಚೇರಿಯಿಂದ ಅಧಿಕೃತವಾಗಿ ಹೇಳಲಾಗಿದೆ. ಮಾರ್ಗಮಧ್ಯೆ ಭಕ್ತರಿಗೆ ಯಾವುದೇ ಆರೋಗ್ಯ ತೊಂದರೆ ಉಂಟಾಗಬಾರದೆಂಬ ಕಾರಣಕ್ಕೆ ಆರೋಗ್ಯ ತಪಾಸಣೆಗಾಗಿ ಆರೋಗ್ಯ ಕೇಂದ್ರಗಳನ್ನು ಕೂಡ ತೆರೆಯಲಾಗುತ್ತಿದೆ.
ಶಬರಿಮಲೆ ಅಯ್ಯಪ್ಪನ ದರ್ಶನ ಸಿಗದ ಹಿನ್ನೆಲೆಯಲ್ಲಿ ಭಕ್ತರು ಬೇರೆ ಬೇರೆ ಕಡೆ ತೆರಳಿ ಅಯ್ಯಪ್ಪನ ದರ್ಶನ ಪಡೆಯುತ್ತಿದ್ದರು. ಕೇರಳದಲ್ಲಿನ ಶಬರಿಮಲೆಗೆ ತೆರಳಿ ಅಯ್ಯಪ್ಪನ ದರ್ಶನ ಮಾಡುವುದೇ ಭಕ್ತರ ಆಸೆಯಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. 18 ಮೆಟ್ಟಿಲುಗಳನ್ನು ಹತ್ತಿ ಭಕ್ತರು ದರ್ಶನ ಪಡೆಯಬಹುದು.