ಶಬರಿಮಲೆಯಲ್ಲಿ ಸ್ವಾಮಿ ಅಯ್ಯಪ್ಪ ದರ್ಶನ ಆರಂಭವಾಗಿದ್ದು, ದಿನನಿತ್ಯವೂ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಸ್ವಾಮಿಯ ಸನ್ನಿಧಾನಕ್ಕೆ ಭೇಟಿ ನೀಡಲಿದ್ದಾರೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ದಟ್ಟಣೆ ಉಂಟಾಗಿದ್ದು, ವಾಹನಗಳಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿರುವುದು ದಿನನಿತ್ಯದ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.
ದೇವಸ್ಥಾನ ಮಂಡಳಿ, ಪತ್ತನಂತ್ತಿಟ್ಟ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಕಾರಣ ದಟ್ಟಣೆ ನಿರ್ವಹಣೆ ಹಾಗೂ ವಾಹನಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ನ್ಯಾಯಮೂರ್ತಿಗಳ ಪೀಠ ಸೂಚಿಸಿದೆ.