alex Certify ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವವರಿಗೆ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವವರಿಗೆ ಮತ್ತೊಂದು ಗುಡ್ ನ್ಯೂಸ್

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಆರಂಭವಾಗಿದ್ದು ಪ್ರತಿನಿತ್ಯ ಸಹಸ್ರಾರು ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ದರ್ಶನ ಪಡೆಯುತ್ತಿದ್ದಾರೆ. ದೇಶದ ವಿವಿಧ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಯ್ಯಪ್ಪ ಭಕ್ತರು ಆಗಮಿಸುತ್ತಿದ್ದರು ಕೇರಳ ಸರ್ಕಾರ ಹಲವು ಸೌಲಭ್ಯಗಳನ್ನು ಒದಗಿಸಿದೆ.

ಇದರ ಮಧ್ಯೆ ಇದೀಗ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವವರಿಗೆ ಮತ್ತೊಂದು ಗುಡ್ ನ್ಯೂಸ್ ಇಲ್ಲಿದೆ. ಶಬರಿಮಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳನ್ನು ಒದಗಿಸುವಂತೆ ಕೇರಳ ಹೈಕೋರ್ಟ್, ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ತಕ್ಷಣವೇ ಇದನ್ನು ಕಾರ್ಯರೂಪಕ್ಕೆ ತರುವಂತೆ ಆದೇಶಿಸಿದೆ.

ನೀಲಕ್ಕಲ್ ಮತ್ತು ಪಂಪೆಯಲ್ಲಿ ಬಸ್ ಗಳ ಕೊರತೆಯಿಂದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಸಮಸ್ಯೆ ಆಗುತ್ತಿದ್ದು, ಇದನ್ನು ನಿವಾರಿಸುವ ನಿಟ್ಟಿನಲ್ಲಿ ಕೂಡಲೇ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ಸಂಚಾರ ಆರಂಭಿಸುವಂತೆ ಆದೇಶಿಸಲಾಗಿದ್ದು, ತಿರುವಾಂಕೂರು ದೇವಸ್ವಂ ಬೋರ್ಡ್, ಪತ್ತನಂತ್ತಿಟ್ಟ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಗಮನಹರಿಸುವಂತೆ ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...