alex Certify ಶಾಂತಿ ಕಾಪಾಡಲು ಸಂಸದ ರಾಘವೇಂದ್ರ ಸೇರಿ ಹಲವರ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಂತಿ ಕಾಪಾಡಲು ಸಂಸದ ರಾಘವೇಂದ್ರ ಸೇರಿ ಹಲವರ ಮನವಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 144 ಸೆಕ್ಷನ್ ಅನ್ವಯ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಸಹಕರಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಬಿ.ವೈ. ರಾಘವೇಂದ್ರ, ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆಗೆ ಕಾರಣಕರ್ತರಾದ ಅಪರಾಧಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಭರವಸೆ ನೀಡಿದರು.

ಇದೇ ವೇಳೆ ಮಾತನಾಡಿದ ಸ್ವರಾಜ್ ಇಂಡಿಯಾ ಜಿಲ್ಲಾ ವಕ್ತಾರ ಕೆ.ಪಿ. ಶ್ರೀಪಾಲ್, ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ನಡೆದಿರುವ ಹತ್ಯೆ ಅಮಾನವೀಯವಾಗಿದ್ದು, ಇದನ್ನು ಒಕ್ಕೊರಲಿನಿಂದ ಖಂಡಿಸುತ್ತೇವೆ. ಏನೇ ಕಾರಣಗಳಿರಬಹುದು, ಅದನ್ನು ಹತ್ಯೆಯ ಮೂಲಕವೇ ಪ್ರತೀಕಾರ ನೀಡಬೇಕಾದ ಮನೋ ಪ್ರವೃತ್ತಿ ಮಾನವ ಸಮಾಜಕ್ಕೆ ಅಪಾಯಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದರು.

ಗಾಯಾಳು ಎಂದು 50 ಲಕ್ಷ ರೂ. ಪರಿಹಾರ ಕೇಳಿದ ಈತ ಸೋಷಿಯಲ್‌ ಮೀಡಿಯಾದಿಂದಾಗಿ ಸಿಕ್ಕಿಬಿದ್ದ….!

ಇನ್ನೂ ಬದುಕನ್ನು ಕಟ್ಟಿ ಕೊಳ್ಳಬೇಕಿದ್ದ ಯುವಕರು, ಕುಟುಂಬವನ್ನು ನಿರ್ವಹಣೆ ಮಾಡಬೇಕಿದ್ದ ಹುಡುಗರ ಸಾವು ಕುಟುಂಬದ ಬೆಳಕನ್ನು ಆರಿಸಿದೆ. ಈ ಕೃತ್ಯವನ್ನು ಯಾರೇ ಮಾಡಿರಲಿ, ಅವರಿಗೆ ಕಠಿಣ ಶಿಕ್ಷೆಯಾಗಬೇಕು, ಇಂತಹ ಘಟನೆಗಳ ಹಿಂದಿರುವ ವ್ಯಕ್ತಿಗಳು, ಸಂಘಟನೆ ಯಾರೇ ಇದ್ದರೂ ಅವರ ಮೇಲೆ ಕಠಿಣ ಕ್ರಮ ಜರುಗಿಸುವ ಮೂಲಕ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಮತ್ತು ಹತ್ಯೆಗೀಡಾದ ಯುವಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ನಿನ್ನೆ ನಡೆದ ಕೊಲೆ ಹಾಗೂ ಗಲಭೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಶಿವಮೊಗ್ಗ ಜಿಲ್ಲಾ ಸಮಿತಿ ಖಂಡಿಸಿದ್ದು, ಶಿವಮೊಗ್ಗ ನಗರದ ಜನತೆ ಶಾಂತಿ ಕಾಪಾಡುವಂತೆ ಮನವಿ ಮಾಡಿದೆ.

ಕಳೆದ ರಾತ್ರಿ ಹರ್ಷ ಎಂಬ ಯುವಕನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದು, ಈ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಖಂಡಿಸಿದೆ. ಈ ದುಷ್ಕೃತ್ಯ ಎಸಗಿದ ಆರೋಪಿಗಳನ್ನು ಆದಷ್ಟು ಬೇಗ ಪತ್ತೆ ಹಚ್ಚಬೇಕು. ಯಾವುದೇ ಪಕ್ಷ, ಧರ್ಮ, ಜಾತಿಯಾದರೂ ಸಹ ಯಾವುದೇ ಒತ್ತಡಕ್ಕೆ ಮಣಿಯದೇ ಕಠಿಣ ಕ್ರಮ ಜರುಗಿಸಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಹೆಚ್.ಎಸ್. ಸುಂದರೇಶ್ ಮನವಿ ಮಾಡಿದ್ದಾರೆ.

ಈ ನಡುವೆ ಸೀಗೆಹಟ್ಟಿಯಲ್ಲಿರುವ ಹರ್ಷ ನಿವಾಸಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಋಷಿಕುಮಾರ ಸ್ವಾಮೀಜಿ, ಆರ್.ಎಸ್.ಎಸ್. ಪ್ರಮುಖ ಪಟ್ಟಾಭಿ, ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ವಾಸುದೇವ್, ಬಜರಂಗದಳ ಪ್ರಮುಖರು, ಹಿಂದೂ ಪರ ಸಂಘಟನೆ ಪ್ರಮುಖರು ಮೃತನ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ, ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ ಪ್ರಧಾನಿವರೆಗೆ ತಲುಪಿದ್ದು, ನಗರದಲ್ಲಿ ಶಾಂತಿ ಕಾಪಾಡುವಂತೆ ಮೋದಿ ಅವರು ವಿನಂತಿಸಿದ್ದಾರೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...