alex Certify ಶಾಕಿಂಗ್‌…! ಭಾರತದಲ್ಲಿ 55 ಡಿಗ್ರಿ ಸೆಲ್ಸಿಯಸ್‌ಗೆ ತಲುಪಲಿದೆ ತಾಪಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್‌…! ಭಾರತದಲ್ಲಿ 55 ಡಿಗ್ರಿ ಸೆಲ್ಸಿಯಸ್‌ಗೆ ತಲುಪಲಿದೆ ತಾಪಮಾನ

ದೇಶದ ಬಹುತೇಕ ರಾಜ್ಯಗಳು ಬಿಸಿಲಿನ ತಾಪಕ್ಕೆ ತತ್ತರಿಸುತ್ತಿವೆ. ಉಷ್ಣಾಂಶ 40-44 ಡಿಗ್ರಿ ಸೆಲ್ಸಿಯಸ್‌ನಷ್ಟಿದ್ದರೂ ಅದನ್ನು ತಡೆದುಕೊಳ್ಳುವುದು ಅಸಾಧ್ಯ. ಎಸಿ, ಕೂಲರ್, ಫ್ಯಾನ್‌  ಯಾವುದೂ ಕೆಲಸ ಮಾಡುತ್ತಿಲ್ಲ. ಅಂಥದ್ರಲ್ಲಿ ತಾಪಮಾನ 55 ಡಿಗ್ರಿ ಸೆಲ್ಸಿಯಸ್ ತಲುಪಿದರೆ ಏನಾಗಬಹುದು ಯೋಚಿಸಿ. ಇದು ಸಂಭವಿಸಿದಲ್ಲಿ, ನಾವೆಲ್ಲರೂ 30 ಪಟ್ಟು ಹೆಚ್ಚು ಶಾಖದ ಹೊಡೆತವನ್ನು ಅನುಭವಿಸಬೇಕಾಗುತ್ತದೆ. ಇತ್ತೀಚೆಗೆ ಬಹಿರಂಗಗೊಂಡ ವರದಿಯಲ್ಲಿ, ಹೆಚ್ಚುತ್ತಿರುವ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯು ಈ ಸಮಸ್ಯೆಯನ್ನು ಉಂಟುಮಾಡಬಹುದು ಎಂದು ಹೇಳಲಾಗಿದೆ.

ಮುಂಬರುವ ದಿನಗಳಲ್ಲಿ ದೆಹಲಿ ಮಾತ್ರವಲ್ಲದೆ ಭಾರತದ ಅನೇಕ ನಗರಗಳಲ್ಲಿ ಗರಿಷ್ಠ ತಾಪಮಾನವು ಪ್ರಸ್ತುತ ಮಟ್ಟಕ್ಕಿಂತ 7-8 ಡಿಗ್ರಿಗಳಷ್ಟು ಹೆಚ್ಚಾಗಬಹುದು. ಇತ್ತೀಚೆಗೆ ರಾಪಿಡ್ ಅಟ್ರಿಬ್ಯೂಷನ್ ಅನಾಲಿಸಿಸ್ ವರದಿಯನ್ನು ಬಿಡುಗಡೆ ಮಾಡಲಾಗಿದೆ. ಇದನ್ನು ವರ್ಲ್ಡ್ ವೆದರ್ ಅಟ್ರಿಬ್ಯೂಷನ್ ಗ್ರೂಪ್ಸ್ ವಿಜ್ಞಾನಿಗಳ ತಂಡ ಸಿದ್ಧಪಡಿಸಿದೆ. ಮುಂದಿನ ಕೆಲವು ವರ್ಷಗಳಲ್ಲಿ ಈ ಪ್ರದೇಶದಲ್ಲಿ ಶಾಖದ ಅಲೆಗಳು 30 ಪಟ್ಟು ಹೆಚ್ಚು ಆಗಬಹುದು ಎಂದು ವರದಿ ಊಹಿಸಿದೆ.

ಭಾರತ, ಬಾಂಗ್ಲಾದೇಶ ಮತ್ತು ಥೈಲ್ಯಾಂಡ್‌ನಂತಹ ದೇಶಗಳು 55 ಡಿಗ್ರಿ ಸೆಲ್ಸಿಯಸ್‌ವರೆಗಿನ ಗರಿಷ್ಠ ತಾಪಮಾನವನ್ನು ಎದುರಿಸಬೇಕಾಗುತ್ತದೆ. ಬಿಸಿಗಾಳಿಯಿಂದ ಉಂಟಾಗುವ ಹಾನಿಯನ್ನು ತಡೆಯುವ ಕ್ರಮಗಳತ್ತ ದೇಶವೂ ಗಮನಹರಿಸಬೇಕು. ಎಚ್ಚರಿಕೆ ವ್ಯವಸ್ಥೆಗಳನ್ನು ಬಲಪಡಿಸಬೇಕು. ತಾಪಮಾನವನ್ನು ಗರಿಷ್ಠ ಮಟ್ಟದಲ್ಲಿ ನಿರ್ವಹಿಸುವ ರೀತಿಯಲ್ಲಿ ಮನೆಗಳನ್ನು ವಿನ್ಯಾಸಗೊಳಿಸಬೇಕು ಎನ್ನುತ್ತಾರೆ ತಜ್ಞರು.

ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಬೇಕೆಂದು ಪ್ರತಿಪಾದಿಸಿದ್ದಾರೆ. ಇಂಗಾಲದ ಮಟ್ಟವನ್ನು ನಿಗ್ರಹಿಸುವ ಪ್ರಯತ್ನದಲ್ಲಿ ಅಭಿವೃದ್ಧಿ ಹೊಂದಿದ ಮತ್ತು ಅಭಿವೃದ್ಧಿಶೀಲ ರಾಷ್ಟ್ರಗಳ ನಡುವೆ  ಸಮನ್ವಯದ ಕೊರತೆಯಿದೆ ಅನ್ನೋದು ಅವರ ಅಭಿಪ್ರಾಯ. ಉಷ್ಣಾಂಶ ಏರಿಕೆಯನ್ನು ತಡೆಯಲು ಹಸಿರು ಚಲನಶೀಲತೆಯನ್ನೂ ಉತ್ತೇಜಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...