alex Certify ಶಾಪಿಂಗ್‌ ಮಾಲ್‌ ನಲ್ಲಿ ಬೆಂಕಿ ಅವಘಡ – ಹೊತ್ತಿ ಉರಿದ ಲಕ್ಷಾಂತರ ರೂ. ಮೌಲ್ಯದ ವಸ್ತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಪಿಂಗ್‌ ಮಾಲ್‌ ನಲ್ಲಿ ಬೆಂಕಿ ಅವಘಡ – ಹೊತ್ತಿ ಉರಿದ ಲಕ್ಷಾಂತರ ರೂ. ಮೌಲ್ಯದ ವಸ್ತು

ಬೆಂಗಳೂರು : ಇಲ್ಲಿಯ ಅರಕೆರೆ ಗೇಟ್ ಹತ್ತಿರ ಇರುವ ಸೌಥ್ ಇಂಡಿಯಾ ಮಾಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ವೀಕೆಂಡ್ ನಿಂದಾಗಿ ಯಾವುದೇ ಪ್ರಾಣ- ಹಾನಿ ಸಂಭವಿಸಿಲ್ಲ.

ಬೆಂಕಿಯಿಂದ ಮಾಲ್ ನಲ್ಲಿದ್ದ ಬಹುತೇಕ ವಸ್ತುಗಳು ಸುಟ್ಟು ಕರಕಲಾಗಿವೆ. ಬೆಂಕಿಯ ಕೆನ್ನಾಲೆಗೆಯಿಂದ ಬೇಗನೆ ಮಾಲ್ ಗೆ ಬೆಂಕಿ ಆವರಿಸಿದೆ. ಬೆಂಕಿ ಕಾಣಿಸಿಕೊಂಡಿದ್ದು ಗಮನಕ್ಕೆ ಬರುತ್ತಿದ್ದಂತೆ ಮಾಲ್ ನ ಸಿಬ್ಬಂದಿ ತೆರಳಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ.

ಈ ಮಾಲ್ ನ ಗ್ರೌಂಡ್ ಫ್ಲೋರ್ ನಲ್ಲಿದ್ದ ಸೂಪರ್ ಮಾರ್ಕೆಟ್ ನ ಸ್ಟೋರೇಜ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ತೀವ್ರತೆಗೆ ಸೂಪರ್ ಮಾರ್ಕೆಟ್ ನಲ್ಲಿದ್ದ ವಸ್ತುಗಳೆಲ್ಲ ಬಹುತೇಕವಾಗಿ ಸುಟ್ಟು ಹೋಗಿವೆ. ಅಲ್ಲದೇ, ದಟ್ಟ ಹೊಗೆ ಆವರಿಸಿದೆ. ಆ ನಂತರ ಬೆಂಕಿಯು ಮಾಲ್ ನ ಇನ್ನಿತರ ಕಟ್ಟಡಗಳಿಗೂ ಆವರಿಸಿದೆ. ಇದರಿಂದಾಗಿ ಸ್ಥಳದಲ್ಲಿ ಹಾಗೂ ಸುತ್ತಮುತ್ತ ಕೆಲವು ಸಮಯದವರೆಗೆ ಆತಂಕ ಮನೆ ಮಾಡಿತ್ತು.

ಬೀಟ್ ನಲ್ಲಿದ್ದ ಪೊಲೀಸರಿಗೆ ಈ ಕುರಿತು ಮಾಹಿತಿ ಸಿಗುತ್ತಿದಂತೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಕೂಡಲೇ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ 2 ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಾರ್ಟ್​ ಸರ್ಕ್ಯೂಟ್ ನಿಂದಲೇ ಬೆಂಕಿ ಹೊತ್ತಿಕೊಂಡಿದೆ ಎಂದು ಅಂದಾಜಿಸಲಾಗಿದ್ದು, ವೀಕೆಂಡ್ ನಿಂದಾಗಿ ಮಾಲ್ ಗೆ ಯಾರೂ ಹೋಗಿರಲಿಲ್ಲ. ಹೀಗಾಗಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಆದರೆ, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಮಾತ್ರ ಬೆಂಕಿಗೆ ಆಹುತಿಯಾಗಿವೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...