ಬೆಂಗಳೂರು: ಬಹುತೇಕ ಭಾಗದಲ್ಲಿ ಶಾಲಾ – ಕಾಲೇಜು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕೊರೋನಾ ಕಾರಣದಿಂದಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ವಿದ್ಯಾರ್ಥಿಗಳು ಶಾಲಾ – ಕಾಲೇಜಿಗೆ ಹೋಗಿ ಬರಲು ಅನುಕೂಲವಾಗುವಂತೆ ಬಸ್ ಸಂಚಾರವನ್ನು ಆರಂಭಿಸಲಾಗುವುದು ಎಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಬಸವನಗೌಡ ದದ್ದಲ್ ಅವರ ಪ್ರಶ್ನೆಗೆ ಉತ್ತರಿಸಿದ್ದಾರೆ.
ಬಸ್ ಸಂಪರ್ಕವಿಲ್ಲದ ಗ್ರಾಮಗಳಿಗೆ ಬಸ್ ಸೌಲಭ್ಯ ಕಲ್ಪಿಸುವ ಜೊತೆಗೆ ಬೇಡಿಕೆ ಇರುವ ಕಡೆಯೂ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.