ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಈಗ ಶಿಕ್ಷಣ ಇಲಾಖೆ ಎಂದು ಬದಲಾಯಿಸಲಾಗಿದ್ದು, ಇದೀಗ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸಮಸ್ಯೆಗಳು ಹಾಗೂ ದೂರುಗಳನ್ನು ಪರಿಹರಿಸಲು ವಿಭಿನ್ನ ಪ್ರಯತ್ನವೊಂದಕ್ಕೆ ಕೈ ಹಾಕಲಾಗಿದೆ.
ಹೌದು, ವೆಬ್ ಸೈಟ್ ಒಂದನ್ನು ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದ್ದು, ಇದರಲ್ಲಿ ತೆರೆಯಲಾಗುವ ವಿಶೇಷ ಪುಟ ಒಂದರ ಮೂಲಕ ಯಾರು ಬೇಕಾದರೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸಮಸ್ಯೆ ಮತ್ತು ದೂರುಗಳನ್ನು ಸಲ್ಲಿಸಬಹುದಾಗಿದೆ. ಇದು ಖುದ್ದು ಶಿಕ್ಷಣ ಸಚಿವರ ಗಮನಕ್ಕೆ ಬರಲಿದೆ.
Big News: ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಕರೆ ಮಾಡಿ ಬೆಂಬಲ ಕೋರಿದ ‘ರಾಷ್ಟ್ರಪತಿ’ ಅಭ್ಯರ್ಥಿ ದ್ರೌಪದಿ ಮುರ್ಮು
ಹೀಗೆ ಬಂದ ಸಮಸ್ಯೆ ಹಾಗೂ ದೂರುಗಳನ್ನು ಪರಿಹರಿಸಲು ತಂಡವೊಂದನ್ನು ರಚಿಸಲಾಗುತ್ತಿದ್ದು, ಅದು ಸಂಪೂರ್ಣವಾಗಿ ಇತ್ಯರ್ಥವಾದ ಬಳಿಕ ಶಿಕ್ಷಣ ಸಚಿವರಿಗೆ ಮಾಹಿತಿ ಸಿಗಲಿದೆ. ವೆಬ್ ಸೈಟ್ ಕಾರ್ಯ ಈಗಾಗಲೇ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ ಎಂದು ಹೇಳಲಾಗಿದೆ.