alex Certify ಶಾಲೆಗಳಲ್ಲಿ ಕೊರೊನಾ ಆರ್ಭಟ; ತರಗತಿ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಗಳಲ್ಲಿ ಕೊರೊನಾ ಆರ್ಭಟ; ತರಗತಿ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ

ಮಂಡ್ಯ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರನ್ನು ಬೆಂಬಿಡದೇ ಕಾಡುತ್ತಿದೆ. ಕೋವಿಡ್ ಅಟ್ಟಹಾಸ ಹಿನ್ನೆಲೆಯಲ್ಲಿ ಶಾಲಾ ತರಗತಿಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡುವಂತೆ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದ ಘಟನೆ ಬೆಳಕಿಗೆ ಬಂದಿದೆ.

ಮಂಡ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಶಾಲಾ ಮಕ್ಕಳಿಗೂ ಸೋಂಕು ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜನವರಿ 17ರಿಂದ ಜನವರಿ 22ರವರೆಗೆ 1-7ನೇ ತರಗತಿವರೆಗಿನ ಭೌತಿಕ ತರಗತಿಗಳನ್ನು ರದ್ದುಗೊಳಿಸುವಂತೆ ಜಿಲ್ಲಾಧಿಕಾರಿ ಅಶ್ವಥಿ ಆದೇಶ ನೀಡಿದ್ದಾರೆ.

ಸರ್ಕಾರಿ, ಖಾಸಗಿ, ವಸತಿ ಶಾಲೆಗಳನ್ನು ಒಳಗೊಂಡಂತೆ 1-7ನೇ ತರಗತಿವರೆಗೆ ಹಾಗೂ 6 ದಿನಗಳ ಕಾಲ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡುವಂತೆ ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...