alex Certify ಶಾಲೆಗಳಲ್ಲಿ ಕೊರೊನಾ ಕಂಡುಬಂದರೆ ಮಾಡಬೇಕಾದ್ದೇನು…? ಸಚಿವ ಸುಧಾಕರ್ ನೀಡಿದ್ದಾರೆ ಈ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಗಳಲ್ಲಿ ಕೊರೊನಾ ಕಂಡುಬಂದರೆ ಮಾಡಬೇಕಾದ್ದೇನು…? ಸಚಿವ ಸುಧಾಕರ್ ನೀಡಿದ್ದಾರೆ ಈ ಮಾಹಿತಿ

ಕಳೆದ ಕೆಲವು ದಿನಗಳಿಂದ ಇಳಿಮುಖವಾಗಿದ್ದ ಕೊರೊನಾ ಸೋಂಕು ಈಗ ಮತ್ತೆ ಏರಿಕೆಯತ್ತ ಮುಖ ಮಾಡಿದೆ. ಈ ಹಿನ್ನೆಲೆಯಲ್ಲಿ ಕೊರೊನಾ 4ನೇ ಅಲೆ ಭೀತಿ ಎದುರಾಗಿದ್ದು, ಹೀಗಾಗಿ ರಾಜ್ಯ ಸರ್ಕಾರ ಮತ್ತು ಕಠಿಣ ನಿಯಮಾವಳಿಗಳನ್ನು ಜಾರಿಗೆ ತರಲು ಮುಂದಾಗಿದೆ.

ಮಾಸ್ಕ್ ಧಾರಣೆ ಕಡ್ಡಾಯ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮೊದಲಾದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಈಗಾಗಲೇ ಸೂಚನೆ ರವಾನಿಸಿದ್ದು, ನಿಯಮವನ್ನು ಪಾಲಿಸದಿದ್ದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲು ಚಿಂತನೆ ನಡೆಸಿದೆ.

ಶಾಲಾ-ಕಾಲೇಜುಗಳೂ ಸಹ ಈಗ ಆರಂಭವಾಗಿದ್ದು, ಹೀಗಾಗಿ ಕೋವಿಡ್ ನಿಯಮಗಳನ್ನು ಪಾಲಿಸಲು ತಿಳಿಸಲಾಗಿದೆ. ಇದರ ಮಧ್ಯೆ ಬೆಂಗಳೂರಿನ ದಾಸರಹಳ್ಳಿಯಲ್ಲಿರುವ ಎರಡು ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದ್ದು ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಡಾ. ಸುಧಾಕರ್, ಇಂತಹ ಶಾಲೆಗಳನ್ನು ಕ್ಲೋಸ್ ಮಾಡಿ ಕೊರೊನಾ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...