ಕಳೆದ ಕೆಲವು ದಿನಗಳಿಂದ ಕೇಳಿ ಬರುತ್ತಿದ್ದ ಶಾಲೆಗಳಲ್ಲಿ ಸಾತ್ವಿಕ ಆಹಾರ ನೀಡುವ ವಿಚಾರ ಕುರಿತಂತೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಹತ್ವದ ಹೇಳಿಕೆ ನೀಡಿದ್ದಾರೆ. ಶಾಲೆಗಳಲ್ಲಿ ಸಾತ್ವಿಕ ಆಹಾರ ನೀಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಮತ್ತು ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಮೊದಲಾದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಧರ್ಮ ಗುರುಗಳ ಸಭೆಯಲ್ಲಿ ಕೆಲವು ಧಾರ್ಮಿಕ ಮುಖಂಡರು ತಮ್ಮ ಅನಿಸಿಕೆ ಹಂಚಿಕೊಂಡಿದ್ದು, ಇದಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.
ನೈತಿಕ ಶಿಕ್ಷಣದ ಜೊತೆಗೆ ಸಾತ್ವಿಕ ಆಹಾರದ ವಿಚಾರವನ್ನು ಬೆರೆಸುವುದು ಸರಿಯಲ್ಲ ಎಂದ ಸಚಿವರು, ಮೊಟ್ಟೆ ನೀಡುತ್ತಿರುವ ಬಳಿಕ ಮಕ್ಕಳಲ್ಲಿನ ಪೌಷ್ಟಿಕಾಂಶ ಸಾಕಷ್ಟು ಸುಧಾರಣೆಯಾಗಿದೆ. ಹೀಗಾಗಿ ಮೊಟ್ಟೆಯನ್ನು ಇನ್ನೂ ಹೆಚ್ಚಿನ ದಿನಕ್ಕೆ ವಿಸ್ತರಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದಿದ್ದಾರೆ.