ಶಾಲೆಗೆ ಅನಧಿಕೃತವಾಗಿ ಗೈರು ಹಾಜರಾಗುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಶಾಲಾವಧಿಯಲ್ಲಿ ತರಗತಿಗಳಿಗೆ ಗೈರು ಹಾಜರಾಗಿ ಖಾಸಗಿ ಕಾರ್ಯಕ್ರಮಗಳಲ್ಲಿ ಶಿಕ್ಷಕರು ಪಾಲ್ಗೊಂಡಿರುವುದು ಕಂಡು ಬಂದರೆ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.
ರಾಜ್ಯದ ಬಹುತೇಕ ಶಾಲೆಗಳಲ್ಲಿ ಬಯೋಮೆಟ್ರಿಕ್ ಅಳವಡಿಸಲಾಗಿದೆಯಾದರೂ ಕೆಲವೆಡೆ ಅಂತರ್ಜಾಲ ಸಂಪರ್ಕ ಇಲ್ಲದ ಕಾರಣ ತೊಂದರೆಯಾಗಿದೆ. ಕುಗ್ರಾಮ, ಬೆಟ್ಟ ಪ್ರದೇಶಗಳಲ್ಲಿರುವ ಕೆಲ ಶಾಲೆಗಳ ಶಿಕ್ಷಕರು ಗೈರು ಹಾಜರಾಗುತ್ತಿರುವ ಆರೋಪ ಕೇಳಿ ಬಂದಿದೆ. ಹೀಗಾಗಿ ಅಂತಹ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.