ಕೊರೊನಾ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ಭೌತಿಕ ತರಗತಿಯಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳು ಇದೀಗ ಶಾಲಾ – ಕಾಲೇಜುಗಳಿಗೆ ತೆರಳುತ್ತಿದ್ದಾರೆ. ಈಗಾಗಲೇ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಆರಂಭವಾಗಿದ್ದರೆ ಇಂದಿನಿಂದ ಪಿಯು ತರಗತಿಗಳು ಆರಂಭವಾಗಿವೆ.
ಇದರ ಮಧ್ಯೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ. ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೈಕಲ್ ಯೋಜನೆಯನ್ನು ಸರ್ಕಾರ ಕೈಬಿಟ್ಟಿಲ್ಲ. ಮುಂದಿನ ದಿನಗಳಲ್ಲಿ ಇದನ್ನು ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ.
ಅಲ್ಲದೆ ರಾಜ್ಯಾದ್ಯಂತ ಮಾದರಿ ಶಾಲೆಗಳನ್ನು ಮಾಡಲು ಸರ್ಕಾರ ಕ್ರಮ ಕ್ರಮ ಕೈಗೊಂಡಿದ್ದು, ಹೋಬಳಿಗೊಂದು ಮಾದರಿ ಶಾಲೆಯನ್ನು ಸ್ಥಾಪಿಸಿ ಅದಕ್ಕೆ ಸೂಕ್ತ ಅನುದಾನ ಮಂಜೂರು ಮಾಡಲಾಗುತ್ತದೆ ಎಂದು ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.