ಕೋಲಾರ: ಶಾಲೆಯಲ್ಲಿ ಶಿಕ್ಷಕಿಯೊಬ್ಬರು ನಮಾಜ್ ಮಾಡಲು ಅವಕಾಶ ಮಾಡಿಕೊಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಹಿಂದು ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ಈ ಘಟನೆ ಜಿಲ್ಲೆಯ ಮುಳಬಾಗಿಲಿನಲ್ಲಿರುವ ಬಳೇಚಂಗಪ್ಪ ಸರ್ಕಾರಿ ಕನ್ನಡ ಶಾಲೆಯಲ್ಲಿ ನಡೆದಿದೆ. ಶಾಲೆಯಲ್ಲಿನ ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಿ ಅಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಡಲಾಗಿತ್ತು.
ಈ ಸುದ್ದಿ ತಿಳಿಯುತ್ತಿದ್ದಂತೆ ಹಿಂದು ಸಂಘಟನೆಗಳ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಇದಕ್ಕೆ ಅವಕಾಶ ಮಾಡಿಕೊಟ್ಟಿದ್ದ ಶಿಕ್ಷಕಿ ಉಮಾದೇವಿ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೇಳಿದ್ದಾರೆ.
ಶಾಲೆಯಲ್ಲಿ ಒಂದೇ ಧರ್ಮದ ವಿದ್ಯಾರ್ಥಿಗಳಿಗೆ ಪ್ರಾರ್ಥನೆ ಮಾಡಲು ಅವಕಾಶ ನೀಡಿ, ವಿದ್ಯಾರ್ಥಿಗಳನ್ನು ತಪ್ಪು ದಾರಿಗೆ ಎಳೆಯುವಂತೆ ಮಾಡಲಾಗುತ್ತಿದೆ ಎಂದು ಸ್ಥಳೀಯ ಹಿಂದುಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಅಲ್ಲದೇ, ಕೊರೊನಾ ಹಾವಳಿ ಕೂಡ ಹೆಚ್ಚಾಗಿದ್ದು, ಒಂದೇ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ನಮಾಜ್ ಮಾಡಲು ಅವಕಾಶ ನೀಡಿದರೆ, ಕೊರೊನಾ ನಿಯಮಗಳನ್ನು ಬ್ರೇಕ್ ಮಾಡಿದಂತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿತ್ತು.