ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನಂದಿಹಾಳ ಪಿಯು ಗ್ರಾಮದಲ್ಲಿನ ಶಾಲೆಯ ಮೇಲ್ಫಾವಣಿ ಕುಸಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಶಾಲೆಯಲ್ಲಿ ಸುಮಾರು 200 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಇನ್ನುಳಿದ ವಿದ್ಯಾರ್ಥಿಗಳು ಪಾರಾಗಿದ್ದಾರೆ. ಹೀಗಾಗಿ ಭಾರೀ ದುರಂತವೊಂದು ತಪ್ಪಿದಂತಾಗಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಪಾಲಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಶಾಲೆಯಲ್ಲಿನ ಕಟ್ಟಡ ತೀರಾ ಹಳೆಯದಾಗಿದ್ದು, ವಿದ್ಯಾರ್ಥಿಗಳ ಪ್ರಾಣಕ್ಕೆ ಅಪಾಯ ತಂದೊಡ್ಡಬಹುದು ಎಂದು ಗ್ರಾಮಸ್ಥರು ಶಾಲೆಯ ಶಿಕ್ಷಕರು ಹಾಗೂ ಆಡಳಿತ ಮಂಡಳಿಗೆ ಈ ಹಿಂದೆಯೇ ಮನವಿ ಮಾಡಲಾಗಿತ್ತು. ಆದರೆ, ಸಂಬಂಧಪಟ್ಟವರು ಮಾತ್ರ ಈ ಕುರಿತು ನಿರ್ಲಕ್ಷ್ಯ ವಹಿಸಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.