ಬೆಂಗಳೂರು: ರಾಜ್ಯಾದ್ಯಂತ ಶಾಲೆ ಹಾಗೂ ಶಿಕ್ಷಣ ಇಲಾಖೆಗಳ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಪ್ಲಾಸ್ಟಿಕ್ ಬಾವುಟ, ಪ್ಲಾಸ್ಟಿಕ್ ತಟ್ಟೆ, ಥರ್ಮಾಕೋಲ್ ಸೇರಿದಂತೆ ಪ್ಲಾಸ್ಟಿಕ್ ನಿಂದ ತಯಾರಿಸಿದ ಯಾವುದೇ ವಸ್ತುಗಳನ್ನು ಬಳಸದಂತೆ ನಿರ್ಬಂಧ ವಿಧಿಸಲಾಗಿದೆ.
ಮುಟ್ಟೆಂದ್ರೆ ಮೈಲಿಗೆ ಎನ್ನುವ ಜನರ ನಡುವೆ ಪರ್ವತವನ್ನೇರಿದ ಸಾಹಸಿ ಯುವತಿಯ ಯಶೋಗಾಥೆ….!
ಶೈಕ್ಷಣಿಕ ಸಂಸ್ಥೆಗಳು, ಸಭೆ ಸಮಾರಂಭಗಳಲ್ಲಿಯೂ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಾಲೆಗಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪ್ಲಾಸ್ಟಿಕ್ ಸುತ್ತಿದ್ದ ಹೂಗುಚ್ಛ, ಪ್ಲಾಸ್ಟಿಕ್ ಕಾಗದದಿಂದ ಪ್ಯಾಕ್ ಮಾಡಿದ್ದ ಪುಸ್ತಕ ನೀಡಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಡಿಡಿಪಿಐ ಹಾಗೂ ಬಿಇಒಗಳಿಗೆ ಪ್ಲಾಸ್ಟಿಕ್ ನಿಷೇಧಕ್ಕೆ ಸೂಚನೆ ಹೊರಡಿಸಲಾಗಿದ್ದು ತಕ್ಷಣದಿಂದಲೇ ಜಾರಿಗೆ ಬರುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.