ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಇಂದು ದೆಹಲಿಗೆ ತೆರಳಿದ್ದು, ದೆಹಲಿಗೆ ಹೊರಡುವ ಮುನ್ನ ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಶಾಸಕ ಅರವಿಂದ್ ಬೆಲ್ಲದ್, ಕೋಟಾ ಶ್ರೀನಿವಾಸ್ ಪೂಜಾರಿ, ಹರತಾಳು ಹಾಲಪ್ಪ ಇಂದು ಮುಂಜಾನೆಯೇ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಆರ್.ಟಿ.ನಗರ ನಿವಾಸಕ್ಕೆ ಆಗಮಿಸಿ ಸಿಎಂ ಜತೆ ಚರ್ಚೆ ನಡೆಸಿದರು.
ಒಳ ಉಡುಪಿನಲ್ಲಿತ್ತು 1 ಕೋಟಿ ರೂ. ಮೌಲ್ಯದ ಚಿನ್ನ….!
ಬಳಿಕ ಮಾಧ್ಯಮಗಳಿಗೂ ಪ್ರತಿಕ್ರಿಯೆ ನೀಡದೇ ಸಿಎಂ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳಿದ್ದು ಕುತೂಹಲವನ್ನು ಇಮ್ಮಡಿಗೊಳಿಸಿದೆ. ದೆಹಲಿ ಪ್ರವಾಸಕ್ಕೆ ತೆರಳಿರುವ ಸಿಎಂ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದು, ಸಚಿವ ಸಂಪುಟ ವಿಸ್ತರಣೆಗೆ ಅನುಮತಿ ಪಡೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇಂದು ಜಾಗತಿಕ ಬಂಡವಾಳ ಹೂಡಿಕೆದಾರ ರಾಷ್ಟ್ರಗಳ ರಾಯಭಾರಿಗಳ ಸಭೆಯಲ್ಲಿ ಸಿಎಂ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಇಂದು ಸಂಜೆ ವರಿಷ್ಠರನ್ನು ಭೇಟಿಯಾಗಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಿದ್ದು, ನಾಳೆ ಬೆಳಿಗ್ಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.