ನವದೆಹಲಿ: ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಹಗ್ಗಜಗ್ಗಾಟ ಮುಂದುವರೆದಿದ್ದು, ನವದೆಹಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಮ್ಮ ಆಪ್ತ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ದೆಹಲಿಯಲ್ಲಿ ಸಂಸದ ಡಿ.ಕೆ. ಸುರೇಶ್ ನಿವಾಸದಲ್ಲಿ ಸಮಾಲೋಚನೆ ನಡೆಸಿ ಶಾಸಕರ ಬೆಂಬಲ ಇರುವುದಾಗಿ ಪರೋಕ್ಷ ಸಂದೇಶ ರವಾನಿಸಿದ್ದಾರೆ. ಡಿ.ಕೆ. ಸುರೇಶ್ ನಿವಾಸದಲ್ಲಿ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಾಲಕೃಷ್ಣ, ಕುಣಿಗಲ್ ರಂಗನಾಥ್, ಇಕ್ಬಾಲ್ ಹುಸೇನ್, ಎ.ಸಿ. ಶ್ರೀನಿವಾಸ್, ವೀರೇಂದ್ರ ಪಪ್ಪಿ, ನೆಲಮಂಗಲ ಶಾಸಕ ಶ್ರೀನಿವಾಸ್ ಅವರೊಂದಿಗೆ ಸಭೆ ನಡೆಸಿದ್ದಾರೆ.
Delhi | Karnataka Congress president DK Shivakumar holds a discussion with leaders of the party and his supporters at his brother-party MP DK Suresh's residence. pic.twitter.com/oBEEnqCbSB
— ANI (@ANI) May 17, 2023