ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ಪ್ರಚೋದನಾಕಾರಿ ಮಾತುಗಳನ್ನಾಡಿದ್ದ ವಿಡಿಯೋವನ್ನು ಶಾಸಕ ರಾಜಾಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಳಿಕ ಅವರನ್ನು ತೆಲಂಗಾಣ ಪೊಲೀಸರು ಬಂಧಿಸಿದ್ದರಾದರೂ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.
ಅವರ ಬಿಡುಗಡೆಯನ್ನು ವಿರೋಧಿಸಿ ಹೈದರಾಬಾದ್ ನಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆದ ಬಳಿಕ ಇದೀಗ ರಾಜಾಸಿಂಗ್ ಅವರನ್ನು ಮತ್ತೆ ಬಂಧಿಸಲಾಗಿದ್ದು, ಪೊಲೀಸರು ಅವರನ್ನು ಚರಲಾಪಲ್ಲಿ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದಾರೆ.
ಇದರ ಮಧ್ಯೆ 2004 ರಿಂದ ಇಲ್ಲಿಯವರೆಗೂ ಶಾಸಕ ರಾಜಾಸಿಂಗ್ ಅವರ ವಿರುದ್ಧ ಬರೋಬ್ಬರಿ 101 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಹೇಳಲಾಗಿದೆ. ಈ ಪೈಕಿ 18 ಕೋಮು ಸಂಘರ್ಷದ ಪ್ರಕರಣಗಳಾಗಿವೆ.
ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ರಾಜಾಸಿಂಗ್, ಪ್ರಚೋದನಾಕಾರಿ ಮಾತುಗಳನ್ನಾಡಿದ ವಿಡಿಯೋ ಬಿಡುಗಡೆಯಾದ ಬಳಿಕ ಬಿಜೆಪಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದೆ. ಅಲ್ಲದೆ ಹತ್ತು ದಿನಗಳೊಳಗಾಗಿ ವಿವರಣೆ ನೀಡುವಂತೆ ನೋಟಿಸ್ ನೀಡಿದೆ.