ಶಿಕ್ಷಕರನ್ನು ಜನಗಣತಿ ಸೇರಿದಂತೆ ಇತರೆ ಕಾರ್ಯಗಳಿಗೆ ನಿಯೋಜಿಸುವುದಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಕುರಿತಂತೆ ಮುಖ್ಯಮಂತ್ರಿಗಳ ಬಳಿ ಮಾತನಾಡುವುದಾಗಿಯೂ ಅವರು ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇತರ ಕೆಲಸಗಳಿಗೆ ಸರ್ಕಾರದ ಕಣ್ಣಿಗೆ ಕಾಣುವುದು ಶಿಕ್ಷಕರು ಮಾತ್ರ. ಆದರೆ ಇದು ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ರಾಜ್ಯದ ಶಿಕ್ಷಣ ವ್ಯವಸ್ಥೆ ಅದ್ವಾನವಾಗುತ್ತಿದ್ದು, ಕೆಲವೊಂದು ತಪ್ಪು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಮುಂದೆಯೂ ಇದೇ ಪರಿಸ್ಥಿತಿ ಮುಂದುವರೆದರೆ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ಹಿಂದುಳಿಯಲ್ಲಿದ್ದು, ಹೀಗಾಗಿ ಶಿಕ್ಷಣ ಸಚಿವರ ಜೊತೆ ಶೀಘ್ರದಲ್ಲೇ ಸಭೆ ನಡೆಸುವುದಾಗಿ ಹೇಳಿದರು.