
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇದಕ್ಕೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಈ ಸಭೆ ಸಂದರ್ಭದಲ್ಲಿ ನೇಮಕ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಲಾಗಿದೆ.