ಪ್ರಸ್ತುತ ಶಿಕ್ಷಕರ ನೇಮಕಾತಿ ನಡೆಯುತ್ತಿದ್ದು, ಇದರ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ.
ಶುಕ್ರವಾರದಂದು ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಿಗೆ ಮತ್ತೆ 15,000 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಶೀಘ್ರವೇ ಆರಂಭಿಸಲಿದ್ದೇವೆ ಎಂದು ತಿಳಿಸಿದ್ದಾರೆ.
ಅಲ್ಲದೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ 100, ಕನಕದಾಸರ ಹೆಸರಿನಲ್ಲಿ 50 ಹಾಸ್ಟೆಲ್ ತೆರೆಯಲು ಸಿದ್ಧತೆ ನಡೆಸಲಾಗಿದ್ದು, ಜೊತೆಗೆ ನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತಲಾ 10 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.