ಇತ್ತೀಚಿಗೆ ನಡೆದ 2021 ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶಿಕ್ಷಕ ಹುದ್ದೆ ಆಕಾಂಕ್ಷಿಯಾಗಿದ್ದ ಅಭ್ಯರ್ಥಿಗಳಿಗೆ ತೀವ್ರ ನಿರಾಸೆಯಾಗಿದೆ. ಸೋಮವಾರದಂದು ಸಾರ್ವಜನಿಕ ಶಿಕ್ಷಣ ಇಲಾಖೆ ಟಿಇಟಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ.
1ರಿಂದ 5ನೇ ತರಗತಿಗೆ ಬೋಧಿಸುವ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ಅರ್ಹತೆಗಾಗಿ ನಡೆದ ಪರೀಕ್ಷೆಯಲ್ಲಿ ಶೇ.20.34 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದರೆ, 6ರಿಂದ 8ನೇ ತರಗತಿವರೆಗಿನ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ಅರ್ಹತೆ ಪರೀಕ್ಷೆಯಲ್ಲಿ ಶೇ.18.82 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.
ಹೆದ್ದಾರಿ ಮಧ್ಯದಿಂದ 40 ಮೀಟರ್ ವರೆಗೆ ಕಟ್ಟಡ ನಿರ್ಮಿಸುವಂತಿಲ್ಲ, ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆ
ಒಟ್ಟಾರೆ ಶೇ.19.34 ಅಭ್ಯರ್ಥಿಗಳು ಮಾತ್ರ ಶಿಕ್ಷಕರ ಹುದ್ದೆಗಳಿಗೆ ಅರ್ಹತೆ ಪಡೆದಿದ್ದು, ಇದರಿಂದಾಗಿ ದೊಡ್ಡ ಸಂಖ್ಯೆಯ ಶಿಕ್ಷಕ ಹುದ್ದೆ ಆಕಾಂಕ್ಷಿಗಳು ತೀವ್ರ ನಿರಾಸೆಗೊಂಡಿದ್ದಾರೆ.