ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2500 ಪ್ರೌಢಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
2200 ಸಹ ಶಿಕ್ಷಕರು, 200 ದೈಹಿಕ ಶಿಕ್ಷಕರು, 100 ವಿಶೇಷ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಆರರಿಂದ ಎಂಟನೇ ತರಗತಿಗೆ 15,000 ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಹೀಗಿರುವಾಗಲೇ ಮತ್ತೆ 2,500 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿ ಸೂಚನೆ ಪ್ರಕಟಿಸಲಾಗುವುದು.