alex Certify ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡ; ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡ; ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ಶಿಕ್ಷಣ ಗುಣಮಟ್ಟ ಸುಧಾರಣೆಗೆ ಕ್ರಮ ; ನ್ಯಾಕ್‌ ಮಾನದಂಡ ಅನುಷ್ಠಾನಕ್ಕೆ ಶಿಕ್ಷಣ ಇಲಾಖೆ  ಸೂಚನೆ | udayavaniಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಮೇ 29 ರಿಂದ ಆರಂಭವಾಗುತ್ತಿದ್ದು, ಇದರ ಮಧ್ಯೆ ಕೆಲವೆಡೆ ಮಳೆ ಸಹ ಸುರಿಯುತ್ತಿದೆ. ಸಿಡಿಲು ಗುಡುಗಿನಿಂದ ಕೂಡಿದ ಮಳೆಯ ಕಾರಣಕ್ಕೆ ಹಲವರ ಜೀವ ಹಾನಿಯೂ ಸಂಭವಿಸಿದ್ದು, ಇದರ ಮಧ್ಯೆ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳ ಕುರಿತಂತೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ.

ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳನ್ನು ತರಗತಿ ನಡೆಸಲು ಬಳಸಿಕೊಳ್ಳದಂತೆ ಸುತ್ತೋಲೆ ಹೊರಡಿಸಲಾಗಿದ್ದು, ಭಾರಿ ಮಳೆಯಿಂದ ಇವುಗಳು ಹಾನಿಗೊಳಗಾಗುವ ಅಥವಾ ಕುಸಿಯುವ ಸಂಭವ ಇರುವ ಕಾರಣ ಈ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.

ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಬಳಿ ಮಕ್ಕಳು ಸುಳಿಯದಂತೆ ನೋಡಿಕೊಳ್ಳಬೇಕು ಹಾಗೂ ತರಗತಿ ನಡೆಸಲು ಸುಸ್ಥಿತಿಯಲ್ಲಿರುವ ಕಟ್ಟಡಗಳನ್ನು ಗುರುತಿಸಿ ಪರ್ಯಾಯ ವ್ಯವಸ್ಥೆ ಕೈಗೊಳ್ಳಬೇಕು ಎಂದು ಹೇಳಲಾಗಿದೆ.

ಅಲ್ಲದೆ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ನೆಲಸಮಗೊಳಿಸಲು ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದ್ದು, ಜೊತೆಗೆ ಪ್ರವಾಹ ಪರಿಸ್ಥಿತಿ ಬಂದ ಸಂದರ್ಭದಲ್ಲಿ ಅಥವಾ ಶಾಲಾ ಆವರಣ ಮತ್ತು ಕೊಠಡಿಗಳು ಜಲಾವೃತಗೊಂಡ ವೇಳೆ ಸಂಬಂಧಪಟ್ಟವರ ಪೂರ್ವಾನುಮತಿ ಪಡೆದು ಶಾಲೆಗಳಿಗೆ ರಜೆ ಘೋಷಿಸಬೇಕು ಹಾಗೂ ಮುಂದಿನ ರಜಾ ದಿನದಲ್ಲಿ ಪಾಠಗಳನ್ನು ಸರಿದೂಗಿಸಬೇಕು ಎಂದು ತಿಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...