alex Certify ಶಿವಮೊಗ್ಗದಲ್ಲಿಂದು ಅಮಿತ್ ಷಾ ರೋಡ್ ಶೋ; ಖಾಕಿ ಸರ್ಪಗಾವಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿಂದು ಅಮಿತ್ ಷಾ ರೋಡ್ ಶೋ; ಖಾಕಿ ಸರ್ಪಗಾವಲು

ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ರಾಜ್ಯದಾದ್ಯಂತ ವ್ಯಾಪಕ ಪ್ರಚಾರ ಕಾರ್ಯ ನಡೆಸಿರುವ ಗೃಹ ಸಚಿವ ಅಮಿತ್ ಷಾ, ಇಂದು ಶಿವಮೊಗ್ಗದಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಶಿವಪ್ಪನಾಯಕ ವೃತ್ತದಿಂದ ರೋಡ್ ಶೋ ಆರಂಭವಾಗಲಿದ್ದು, ನೆಹರು ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ ಮುಖ್ಯರಸ್ತೆ, ಜೈಲ್ ಸರ್ಕಲ್, ಜೈಲ್ ರಸ್ತೆ ಮೂಲಕ ಸಾಗಿ ಲಕ್ಷ್ಮಿ ಟಾಕೀಸ್ ಸರ್ಕಲ್ ನಲ್ಲಿ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಮಾರ್ಗವನ್ನು ಶೂನ್ಯ ಸಂಚಾರ ಮಾರ್ಗವಾಗಿ ಘೋಷಿಸಲಾಗಿದೆ.

ಇಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 7.30 ರ ವರೆಗೆ ಈ ರಸ್ತೆಗಳಲ್ಲಿ ಯಾವುದೇ ವಾಹನಗಳ ನಿಲುಗಡೆಗೆ ಅವಕಾಶ ನಿರಾಕರಿಸಲಾಗಿದ್ದು, ಬದಲಿ ಮಾರ್ಗಗಳನ್ನು ಬಳಸಿಕೊಳ್ಳುವಂತೆ ಸಾರ್ವಜನಿಕರಿಗೆ ಕೋರಲಾಗಿದೆ. ರೋಡ್ ಶೋನಲ್ಲಿ ಭಾಗವಹಿಸುವವರು ತಮ್ಮ ವಾಹನಗಳನ್ನು ಫ್ರೀಡಂ ಪಾರ್ಕ್ ಮೈದಾನ, ಎನ್ಇಎಸ್ ಮೈದಾನ ಮತ್ತು ಸೈನ್ಸ್ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ ಮಾಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...