ಶಿವಮೊಗ್ಗ: ಶಿವಮೊಗ್ಗದಲ್ಲಿ ಎಫ್ ಎಸ್ ಎಲ್ ಲ್ಯಾಬ್ (ವಿಧಿವಿಜ್ಞಾನ ಪ್ರಯೋಗಾಲಯ) ಸ್ಥಾಪನೆಯಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಎಫ್ ಎಸ್ ಎಲ್ ಲ್ಯಾಬ್ ಸ್ಥಾಪನೆಗೆ ಮನವಿ ಮಾಡಲಾಗಿತ್ತು. ಕೇಂದ್ರ ಸರ್ಕಾರದಿಂದ ಅನುಮೋದನೆ ಪತ್ರ ಬಂದಿದೆ. ಶಿವಮೊಗ್ಗದಲ್ಲಿ ಲ್ಯಾಬ್ ಸ್ಥಾಪನೆಯಾಗಲಿದೆ ಎಂದರು.
ವಿಧಿವಿಜ್ಞಾನ ಪ್ರಯೋಗಾಲಯ ಸ್ಥಾಪನೆಗೆ ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿ, ಶಿವಮೊಗ್ಗದಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿತ್ತು. ಇದೀಗ ಶಿವಮೊಗ್ಗದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.