alex Certify ಶಿವಮೊಗ್ಗದ ವಿವಿಧೆಡೆ ಸಂತೋಷ್ ಪಾಟೀಲ್ ‘ಶ್ರದ್ಧಾಂಜಲಿ’ ಫ್ಲೆಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದ ವಿವಿಧೆಡೆ ಸಂತೋಷ್ ಪಾಟೀಲ್ ‘ಶ್ರದ್ಧಾಂಜಲಿ’ ಫ್ಲೆಕ್ಸ್

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಿವಮೊಗ್ಗ ಕ್ಷೇತ್ರದ ಶಾಸಕರ ಕೆ.ಎಸ್. ಈಶ್ವರಪ್ಪ ಶುಕ್ರವಾರದಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಚಿವ ಸ್ಥಾನಕ್ಕೆ ನೀಡಿದ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಆತ್ಮಹತ್ಯೆಗೂ ಮುನ್ನ ಸಂತೋಷ್ ಪಾಟೀಲ್ ಕಳಿಸಿದ್ದ ವಾಟ್ಸಾಪ್ ಸಂದೇಶದಲ್ಲಿ ತನ್ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪನವರೇ ನೇರ ಕಾರಣ. ಕಾಮಗಾರಿ ಪೂರ್ಣಗೊಳಿಸಿದ ಬಿಲ್ ಕೇಳಲು ಹೋದ ವೇಳೆ ಈಶ್ವರಪ್ಪ ತಮ್ಮ ಆಪ್ತರ ಮೂಲಕ ಶೇ.40 ಕಮಿಷನ್ ಗೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದರು.

ಹೀಗಾಗಿ ಶುಕ್ರವಾರ ಈಶ್ವರಪ್ಪನವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರ ಮಧ್ಯೆ ಈಶ್ವರಪ್ಪನವರ ಸ್ವಕ್ಷೇತ್ರ ಶಿವಮೊಗ್ಗ ನಗರದಾದ್ಯಂತ ಸಂತೋಷ್ ಪಾಟೀಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಫ್ಲೆಕ್ಸ್ ಗಳನ್ನು ಅಳವಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...