alex Certify ಶಿವಮೊಗ್ಗ ಜನತೆಗೆ ಗುಡ್ ನ್ಯೂಸ್: ವರ್ಷಾಂತ್ಯಕ್ಕೆ ವಿಮಾನ ನಿಲ್ದಾಣ ಲೋಕಾರ್ಪಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ ಜನತೆಗೆ ಗುಡ್ ನ್ಯೂಸ್: ವರ್ಷಾಂತ್ಯಕ್ಕೆ ವಿಮಾನ ನಿಲ್ದಾಣ ಲೋಕಾರ್ಪಣೆ

ಯಾವುದೇ ಒಂದು ಜಿಲ್ಲೆ ಅಭಿವೃದ್ಧಿ ಹೊಂದಬೇಕಾದರೆ ರಸ್ತೆ, ವಾಯು ಹಾಗೂ ಜಲಮಾರ್ಗ ಬಹು ಮುಖ್ಯವಾಗುತ್ತದೆ. ಶಿವಮೊಗ್ಗ ಜಿಲ್ಲೆ ಸಕಲ ಸೌಲಭ್ಯಗಳನ್ನು ಹೊಂದಿದ್ದರೂ ಸಹ ಇಲ್ಲಿಗೆ ಒಂದು ವಿಮಾನ ನಿಲ್ದಾಣ ಇಲ್ಲವೆಂಬ ಕೊರಗು ಕಾಡಿತ್ತು.

ಇದೀಗ ಆ ಕನಸು ನನಸಾಗುವ ಕಾಲ ಸಮೀಪಿಸಿದ್ದು, ವಿಮಾನ ನಿಲ್ದಾಣ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ತಿಳಿದುಬಂದಿದೆ. ಬಹುತೇಕ ವರ್ಷಾಂತ್ಯಕ್ಕೆ ಈ ವಿಮಾನ ನಿಲ್ದಾಣ ಲೋಕಾರ್ಪಣೆಗೊಳ್ಳುವ ಸಾಧ್ಯತೆ ಇದೆ.

ಶಿವಮೊಗ್ಗ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯೂ ನಡೆಯುತ್ತಿರುವ ಮಧ್ಯೆ ರೈಲು ಮಾರ್ಗವನ್ನು ಮತ್ತಷ್ಟು ವಿಸ್ತರಿಸಬೇಕೆಂಬ ಮನವಿಯೂ ಸಾರ್ವಜನಿಕರಿಂದ ಬರುತ್ತಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...