ಚರ್ಮಗಂಟು ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾಡಳಿತ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ.
ಜಿಲ್ಲೆಯಲ್ಲಿ ನವೆಂಬರ್ 30ರವರೆಗೆ ಜಾನುವಾರು ಸಂತೆ, ಜಾತ್ರೆ ಮತ್ತು ಸಾಗಾಣೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಈ ಆದೇಶ ಸಾಮೂಹಿಕವಾಗಿ ಜಾನುವಾರುಗಳು ಸೇರುವಂತಹ ಸಂತೆ, ಜಾತ್ರೆ ಮತ್ತು ಸಾಗಾಣೆಗೆ ಮಾತ್ರ ಅನ್ವಯವಾಗಲಿದೆ ಎಂದು ತಿಳಿಸಲಾಗಿದ್ದು, ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.