ಶಿವಮೊಗ್ಗ ಜಿಲ್ಲಾ ಕಾರಾಗೃಹದಲ್ಲಿ ನಾಲ್ಕು ದಿನಗಳ ಹಿಂದಷ್ಟೇ ಖಲೀಂ ಎಂಬ ಯುವಕ ಸಾವನ್ನಪ್ಪಿದ್ದು, ಇದರ ಬೆನ್ನಲ್ಲೇ ಮತ್ತೊಬ್ಬ ಕೈದಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ.
ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೇವಸ್ಥಾನದ ಬಳಿ ಭಿಕ್ಷೆ ಬೇಡುತ್ತಿದ್ದ ವೃದ್ಧೆಯನ್ನು ಕೊಲೆ ಮಾಡಿ ಚಿನ್ನಾಭರಣ ಕಳವು ಮಾಡಿದ್ದ ಆರೋಪ ಎದುರಿಸುತ್ತಿದ್ದ ಕರಣ್ ಎಂಬ ಯುವಕ ಕಳೆದ ರಾತ್ರಿ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾನೆ.
ಈ ಮೊದಲು ಖಲೀಂ ಸಾವನ್ನಪ್ಪಿದ ಪ್ರಕಾರದಲ್ಲಿ ಕುಟುಂಬಸ್ಥರು ಇದು ಸಾಧಾರಣ ಸಾವಲ್ಲ ಕೊಲೆ ಎಂದು ಆರೋಪಿಸಿದ್ದರು. ಇದರ ಮಧ್ಯೆ ಈಗ ಮತ್ತೊಂದು ಸಾವು ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.