ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ವಿಚಾರವಾಗಿ ಗಲಾಟೆ ಹಾಗೂ ಯುವಕನಿಗೆ ಚಾಕು ಇರಿತ ಪ್ರಕರಣ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆ ಬೂದಿಮುಚ್ಚಿದ ಕೆಂಡದಂತಿದ್ದು, ಮುಂಜಾಗೃತಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರೆಸಲಾಗಿದೆ.
ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ಆಗಸ್ಟ್ 15ರಂದು ಸಾವರ್ಕರ್ ಫ್ಲೆಕ್ಸ್ ತೆರವು ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಇದೇ ವಿಚಾರವಾಗಿ ಯುವಕನೊಬ್ಬನಿಗೆ ಚಾಕು ಇರಿಯಲಾಗಿತ್ತು. ಈ ಪ್ರಕರಣ ಬೆನ್ನಲ್ಲೇ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.
ಇದೀಗ ನಿಷೇಧಾಜ್ಞೆಯನ್ನು ಇಂದು ರಾತ್ರಿ 10 ಗಂಟೆಯವರೆಗೂ ಮುಂದುವರೆಸಿ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.