alex Certify ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಧನ್ವೀರ್ ನಟನೆಯ ‘ವಾಮನ’ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಧನ್ವೀರ್ ನಟನೆಯ ‘ವಾಮನ’ ಟೀಸರ್

‘ಬಜಾರ್’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಧನ್ವೀರ್ ಕೈಯಲ್ಲಿ ಈಗಾಗಲೇ ಸಾಕಷ್ಟು ಸಿನಿಮಾಗಳಿವೆ. ಇತ್ತೀಚೆಗೆ ‘ಬೈಟು ಲವ್’ ತೆರೆಕಂಡ ಬಳಿಕ ಇದೀಗ ಶಂಕರ್ ರಾಮನ್ ನಿರ್ದೇಶನದ ಬಹುನಿರೀಕ್ಷಿತ ‘ವಾಮನ’ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ನೀಡಿದ್ದಾರೆ.

ಈಗಾಗಲೇ ಬಹುತೇಕ ಶೂಟಿಂಗ್ ಪೂರ್ಣಗೊಳಿಸುವ ಚಿತ್ರತಂಡ ಶೀಘ್ರದಲ್ಲೇ ಟೀಸರ್ ಬಿಡುಗಡೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ. ಈ ವಿಷಯ ತಿಳಿಯುತ್ತಿದ್ದಂತೆ ಶೋಕ್ದಾರ್ ಧನ್ವೀರ್ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

ಈಕ್ವಿನಾಕ್ಸ್ ಗ್ಲೋಬಲ್ ಎಂಟರ್ಟೇನ್ಮೆಂಟ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಸಂತೋಷ್ ಆರ್ಮುಗಂ ಛಾಯಾಗ್ರಹಣವಿದೆ. ಧನ್ವೀರ್ ಗೆ ಜೋಡಿಯಾಗಿ ರಚನಾ ರೈ ಅಭಿನಯಿಸಿದ್ದು. ಇದು ಅವರ ಚೊಚ್ಚಲ ಸಿನಿಮಾವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...