ಬೆಂಗಳೂರು: ಅನ್ನಭಾಗ್ಯ ಯೋಜನೆಯ 5 ಕೆಜಿ ಹೆಚ್ಚುವರಿ ಬದಲಿಗೆ ನಗದು ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದ್ದಾರೆ.
ಸಾಂಕೇತಿಕವಾಗಿ ಮೈಸೂರು ಮತ್ತು ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ಹಣ ಸಂದಾಯ ಮಾಡಲಾಗಿದ್ದು, ಇಂದಿನಿಂದ ಪ್ರತಿದಿನ 4 ಜಿಲ್ಲೆಗಳಿಗೆ ಮುಂದಿನ 10 ದಿನಗಳ ಒಳಗೆ ಎಲ್ಲಾ ಫಲಾನುಭವಿಗಳಿಗೆ ಹಣ ಸಂದಾಯವಾಗಲಿದೆ.
ಜುಲೈ ತಿಂಗಳ ಪಡಿತರ ಹಣವನ್ನು ಈ ತಿಂಗಳ ಅಂತ್ಯದೊಳಗೆ ಹಂತ ಹಂತವಾಗಿ ವಿತರಿಸಲಾಗುತ್ತದೆ. 1.28 ಕೋಟಿ ಅಂತ್ಯೋದಯ, 4.42 ಕೋಟಿ ಬಿಪಿಎಲ್ ಕುಟುಂಬಗಳಿಗೆ ಹಣ ನೀಡಲಾಗುವುದು. ಎಲ್ಲರಿಗೂ 10 ಕೆಜಿ ಅಕ್ಕಿ ನೀಡಲು ಅಕ್ಕಿ ಸಿಗದ ಕಾರಣ 5 ಕೆಜಿ ಹೆಚ್ಚುವರಿ ಆಹಾರಧಾನ್ಯದ ಹಣವನ್ನು ಖಾತೆಗೆ ಜಮಾ ಮಾಡಲಾಗುವುದು. ತಲಾ 170 ರೂಪಾಯಿಯಂತೆ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ.