ರಾಜ್ಯದಾದ್ಯಂತ ಇಂದು ಸಡಗರ ಸಂಭ್ರಮದಿಂದ ಶ್ರೀ ರಾಮನವಮಿ ಆಚರಿಸಲಾಗುತ್ತಿದ್ದು, ಹಬ್ಬದ ಪ್ರಯುಕ್ತ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವು ನಗರಗಳಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ.
ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ – ಮಾಂಸ ಮಾರಾಟ ನಿಷೇಧಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲೂ ನಿಷೇಧ ವಿಧಿಸಲಾಗಿದೆ.
ಮಾಂಸ ಮಾರಾಟಗಾರರು ಈ ಸಂದರ್ಭದಲ್ಲಿ ಆದೇಶವನ್ನು ಪಾಲಿಸಬೇಕು ಎಂದು ಸೂಚಿಸಲಾಗಿದ್ದು, ಒಂದೊಮ್ಮೆ ಇದನ್ನು ಉಲ್ಲಂಘಿಸಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.