alex Certify ಶ್ರೀ ಕ್ಷೇತ್ರ ‘ಧರ್ಮಸ್ಥಳ’ಕ್ಕೆ ತೆರಳುವ ಭಕ್ತಾದಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರೀ ಕ್ಷೇತ್ರ ‘ಧರ್ಮಸ್ಥಳ’ಕ್ಕೆ ತೆರಳುವ ಭಕ್ತಾದಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುವ ಭಕ್ತಾದಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಕ್ಟೋಬರ್ 25ರಂದು ಸೂರ್ಯ ಗ್ರಹಣ ಇರುವುದರಿಂದ ಅಂದು ಮಧ್ಯಾಹ್ನ 2:30 ರಿಂದ ರಾತ್ರಿ 7.30 ರ ವರೆಗೆ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ.

ಗ್ರಹಣ ಮುಗಿದ ನಂತರ ಸ್ವಚ್ಛತಾ ಕಾರ್ಯಗಳನ್ನು ಕೈಗೊಂಡು ಬಳಿಕ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ದೇಗುಲದ ಪಾರುಪತ್ಯಗಾರ ಲಕ್ಷ್ಮೀನಾರಾಯಣ ರಾವ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲೂ ಅಕ್ಟೋಬರ್ 25 ರಂದು ಸೂರ್ಯಗ್ರಹಣದ ಪ್ರಯುಕ್ತ ದೇವರ ದರ್ಶನ ಮಾತ್ರವಲ್ಲದೆ ಯಾವುದೇ ಸೇವೆಗಳು ನಡೆಯುವುದಿಲ್ಲ ಎಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...