alex Certify ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ‘ಲಕ್ಷ ದೀಪೋತ್ಸವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ‘ಲಕ್ಷ ದೀಪೋತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಡಿಸೆಂಬರ್ 3ರ ವರೆಗೆ ಲಕ್ಷ ದೀಪೋತ್ಸವ ನಡೆಯಲಿದ್ದು, ಇದರ ಜೊತೆಗೆ ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ ಸಹ ಆಯೋಜಿಸಲಾಗಿದೆ. ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಸಾನಿಧ್ಯದಲ್ಲಿ ಈ ಕಾರ್ಯಕ್ರಮಗಳು ನಡೆಯಲಿವೆ.

ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ಸ್ವತಃ ಶ್ರೀ ಮಂಜುನಾಥ ಸ್ವಾಮಿಯೇ ದೇವಾಲಯದಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುವುದು ವಿಶೇಷ. ಅಲ್ಲದೆ 5 ಕಟ್ಟೆಗಳಿಗೆ ದೇವರು ಭೇಟಿ ನೀಡುತ್ತಾರೆ. ಇದನ್ನು ಕಣ್ತುಂಬಿಕೊಂಡು ಭಕ್ತರು ಪುನೀತರಾಗುತ್ತಾರೆ.

ಡಿಸೆಂಬರ್ 2ರಂದು ಸರ್ವಧರ್ಮ ಸಮ್ಮೇಳನ ನಡೆಯಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದಾರೆ. ಡಿಸೆಂಬರ್ 3 ರಂದು ನಡೆಯಲಿರುವ ಸಾಹಿತ್ಯ ಸಮ್ಮೇಳನವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಉದ್ಘಾಟಿಸಲಿದ್ದಾರೆ.

ಅಲ್ಲದೆ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಭಕ್ತಾದಿಗಳು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸುವ ಮೂಲಕ ಪಾಲ್ಗೊಳ್ಳಲು ಕೋರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...