alex Certify ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಾಳೆ 51ನೇ ವರ್ಷದ ಸಾಮೂಹಿಕ ವಿವಾಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಾಳೆ 51ನೇ ವರ್ಷದ ಸಾಮೂಹಿಕ ವಿವಾಹ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್ 3 ರ ನಾಳೆ 51ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, 201 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ನಾಳೆ ಸಂಜೆ 6:40ಕ್ಕೆ ಲಗ್ನ ಮುಹೂರ್ತದಲ್ಲಿ ವಿವಾಹ ನೆರವೇರಲಿದ್ದು, ಇಂದು ದಾಖಲೆಗಳನ್ನು ಪರಿಶೀಲಿಸಿದ ಬಳಿಕ ವಧುವಿಗೆ ಸೀರೆ, ರವಿಕೆ ಕಣ ಹಾಗೂ ವರನಿಗೆ ಧೋತಿ – ಶಾಲು ನೀಡಲಾಗುತ್ತದೆ.

ನಾಳೆ ಸಂಜೆ 5:00 ಗಂಟೆಗೆ ಮೆರವಣಿಗೆಯಲ್ಲಿ ವಧು-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿ ಬಂದ ಬಳಿಕ ಅಮೃತವರ್ಷಿಣಿ ಸಭಾಭವನದಲ್ಲಿ ವಿವಾಹ ಸಮಾರಂಭ ನಡೆಯಲಿದ್ದು, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ ಹೆಗ್ಗಡೆ ಹಾಗೂ ನಟ ದರ್ಶನ್ ಮಂಗಳಸೂತ್ರ ವಿತರಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...