alex Certify ‘ಶ್ರೀ ಕ್ಷೇತ್ರ ಧರ್ಮಸ್ಥಳ’ ಕ್ಕೆ ತೆರಳುವ ಭಕ್ತರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಶ್ರೀ ಕ್ಷೇತ್ರ ಧರ್ಮಸ್ಥಳ’ ಕ್ಕೆ ತೆರಳುವ ಭಕ್ತರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನವೆಂಬರ್ 8ರಂದು ಗ್ರಸ್ತೋದಯ ಖಗ್ರಾಸ ಚಂದ್ರ ಗ್ರಹಣ ಸಂಭವಿಸಲಿರುವ ಹಿನ್ನೆಲೆಯಲ್ಲಿ ಅಂದು ದರ್ಶನ ಮತ್ತು ಸೇವೆಯಲ್ಲಿ ವ್ಯತ್ಯಯವಾಗಲಿದೆ.

ನವೆಂಬರ್ 8ರಂದು ದೇವಾಲಯದಲ್ಲಿ ಮಧ್ಯಾಹ್ನ 1:30 ರಿಂದ ರಾತ್ರಿ 7:00 ರ ವರೆಗೆ ಭಕ್ತರಿಗೆ ದೇವರ ದರ್ಶನ ಮತ್ತು ಯಾವುದೇ ಪೂಜೆಗೆ ಅವಕಾಶ ಇರುವುದಿಲ್ಲ.

ಅಂದು ಮಧ್ಯಾಹ್ನ 1:30ರ ವರೆಗೆ ಮಾತ್ರ ಭೋಜನ ವ್ಯವಸ್ಥೆ ಇರಲಿದ್ದು, ಬಳಿಕ ಸಂಜೆ 7 ಗಂಟೆಯಿಂದ ಭೋಜನ ವ್ಯವಸ್ಥೆ ನಡೆಸಲಾಗುತ್ತದೆ. ದರ್ಶನದ ಸಮಯ ನೋಡಿಕೊಂಡು ದೂರದೂರಿನ ಭಕ್ತರು ಅಂದು ಆಗಮಿಸಬೇಕೆಂದು ಕೋರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...