ಚಳಿಯ ವಾತಾವರಣದಲ್ಲಿ ರೋಗಗಳು ಮತ್ತು ಸೋಂಕುಗಳಿಂದ ನಿಮ್ಮನ್ನ ನೀವು ರಕ್ಷಿಸಿಕೊಳ್ಳುವುದು ಅತಿ ಅವಶ್ಯಕ. ಚಳಿಗಾಲದಲ್ಲಿ ಹೆಚ್ಚಾಗಿ ಶ್ವಾಸಕೋಶದ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಚಳಿಗಾಲದಲ್ಲಿ ಶ್ವಾಸಕೋಶದ ಸಮಸ್ಯೆಗಳನ್ನು ನಿವಾರಿಸಲು ವಿಟಮಿನ್ ಸಿಯನ್ನು ಹೆಚ್ಚಾಗಿ ಸೇವಿಸಿ.
*ಕಿತ್ತಳೆ: ಕಿತ್ತಳೆಯಲ್ಲಿ ವಿಟಮಿನ್ ಸಿ ಅಧಿಕವಾಗಿದ್ದು, ಇದು ದೇಹಕ್ಕೆ ಖನಿಜಗಳು ಮತ್ತು ಜೀವಸತ್ವಗಳನ್ನು ನೀಡುತ್ತದೆ. ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
*ಸ್ಟ್ರಾಬೆರಿ: ಇದರಲ್ಲಿ ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್ ಗಳು ಸಮೃದ್ಧವಾಗಿದೆ. ಚಳಿಗಾಲದಲ್ಲಿ ಇದನ್ನು ಹೆಚ್ಚಾಗಿ ಸೇವಿಸಿದರೆ ಹಲವು ಆರೋಗ್ಯ ಸಮಸ್ಯೆಗಳು ದೂರವಾಗತ್ತದೆ.
*ದ್ರಾಕ್ಷಿ: ಈ ಹಣ್ಣಿನಲ್ಲಿ ವಿಟಮಿನ್ ಸಿ ಜೊತೆಗೆ ಕೊಬ್ಬು, ಪ್ರೋಟೀನ್, ವಿಟಮಿನ್ ಕೆ, ಪೊಟ್ಯಾಶಿಯಂ, ಫೈಬರ್ ಸಮೃದ್ಧವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ದೇಹದ ವಿಷವನ್ನು ಹೊರಹಾಕುತ್ತದೆ.
*ಕಿವಿ: ಇದರಲ್ಲಿ ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್ ಗಳು ಇದೆ. ಇದು ರೋಗ ನಿರೋಧಕ ಶಕ್ತಿಯನ್ನು ಉತ್ತೇಜಿಸಿ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
*ದಾಳಿಂಬೆ: ಇದರಲ್ಲಿ ವಿಟಮಿನ್ ಸಿ, ಪೊಟ್ಯಾಶಿಯಂ, ಫೈಬರ್ ಹೆಚ್ಚಾಗಿರುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.