ಭಾರತದಲ್ಲಿ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗಿದ್ದು, ಮುಂಬರುವ ದೀಪಾವಳಿಗೆ ಸಿದ್ಧತೆ ನಡೆಯುತ್ತಿದೆ. ಇದರ ಮಧ್ಯೆ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಕೂಡಾ ದೀಪಾವಳಿ ಆಚರಿಸಲು ಸಜ್ಜಾಗಿದ್ದಾರೆ.
ಹೌದು, ಅಕ್ಟೋಬರ್ 24ರಂದು ಶ್ವೇತ ಭವನದಲ್ಲಿ ಬೈಡನ್ ದೀಪಾವಳಿ ಆಚರಿಸಲಿದ್ದು, ಈ ಸಂದರ್ಭದಲ್ಲಿ ಅಮೆರಿಕದಲ್ಲಿರುವ ಭಾರತೀಯ ಸಮುದಾಯದ ಸದಸ್ಯರು ಭಾಗಿಯಾಗಲಿದ್ದಾರೆ.
ಜೋ ಬೈಡನ್ ಅವರ ಪತ್ನಿ ಜಿಲ್ ಕೂಡ ಹಬ್ಬದ ಆಚರಣೆಯಲ್ಲಿ ಪಾಲ್ಗೊಳ್ಳಲಿದ್ದು, ಜೊತೆಗೆ ಬೈಡನ್ ಆಡಳಿತದಲ್ಲಿ ಭಾಗಿಯಾಗಿರುವವರು ಸಹ ಈ ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾಗಲಿದ್ದಾರೆ. ದೀಪಾವಳಿ ಆಚರಣೆಗಾಗಿ ಈಗಾಗಲೇ ಸಕಲ ಸಿದ್ಧತೆ ನಡೆದಿದೆ.