ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್, ಆಪ್ಟಿಕಲ್ ಫೈಬರ್ ಕೇಬಲ್ ಅಳವಡಿಸುವ ವೇಳೆ ಷರತ್ತು ಉಲ್ಲಂಘಿಸಿದ ಕಾರಣಕ್ಕೆ ಹಾಸನ ಜಿಲ್ಲೆಯ ಬೇಲೂರು ಪುರಸಭೆ ನೋಟಿಸ್ ನೀಡುವ ಮೂಲಕ ಚುರುಕು ಮುಟ್ಟಿಸಿದೆ.
ಪುರಸಭಾ ವ್ಯಾಪ್ತಿಯಲ್ಲಿ ಆಪ್ಟಿಕಲ್ ಫೈಬರ್ ಕೇಬಲ್ ಅಳವಡಿಸಲು ರಸ್ತೆ ಅಗೆದಿರುವ ಕಾರಣ ರಸ್ತೆಗಳು ಹಾಳಾಗಿವೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಜೊತೆಗೆ ಪುರಸಭೆಗೆ ಆರ್ಥಿಕ ನಷ್ಟವಾಗಿದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.
ಹೀಗಾಗಿ ರಸ್ತೆ ಡಾಂಬರೀಕರಣಕ್ಕೆ ಅಂದಾಜು 30 ಲಕ್ಷದಷ್ಟು ಹಣವನ್ನು ನೀಡಬೇಕೆಂದು ಪುರಸಭೆ, ಜಿಯೋಗೆ ನೀಡಿರುವ ನೋಟಿಸ್ ನಲ್ಲಿ ಸೂಚಿಸಲಾಗಿದ್ದು, ಮುಂದೆ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದನ್ನು ಕಾದುನೋಡಬೇಕಿದೆ.