alex Certify ಷರತ್ತು ಉಲ್ಲಂಘಿಸಿ ರಸ್ತೆ ಅಗೆದ ಜಿಯೋಗೆ ಪುರಸಭೆಯಿಂದ ನೋಟಿಸ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಷರತ್ತು ಉಲ್ಲಂಘಿಸಿ ರಸ್ತೆ ಅಗೆದ ಜಿಯೋಗೆ ಪುರಸಭೆಯಿಂದ ನೋಟಿಸ್…!

ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್, ಆಪ್ಟಿಕಲ್ ಫೈಬರ್ ಕೇಬಲ್ ಅಳವಡಿಸುವ ವೇಳೆ ಷರತ್ತು ಉಲ್ಲಂಘಿಸಿದ ಕಾರಣಕ್ಕೆ ಹಾಸನ ಜಿಲ್ಲೆಯ ಬೇಲೂರು ಪುರಸಭೆ ನೋಟಿಸ್ ನೀಡುವ ಮೂಲಕ ಚುರುಕು ಮುಟ್ಟಿಸಿದೆ.

ಪುರಸಭಾ ವ್ಯಾಪ್ತಿಯಲ್ಲಿ ಆಪ್ಟಿಕಲ್ ಫೈಬರ್ ಕೇಬಲ್ ಅಳವಡಿಸಲು ರಸ್ತೆ ಅಗೆದಿರುವ ಕಾರಣ ರಸ್ತೆಗಳು ಹಾಳಾಗಿವೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಜೊತೆಗೆ ಪುರಸಭೆಗೆ ಆರ್ಥಿಕ ನಷ್ಟವಾಗಿದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.

ಹೀಗಾಗಿ ರಸ್ತೆ ಡಾಂಬರೀಕರಣಕ್ಕೆ ಅಂದಾಜು 30 ಲಕ್ಷದಷ್ಟು ಹಣವನ್ನು ನೀಡಬೇಕೆಂದು ಪುರಸಭೆ, ಜಿಯೋಗೆ ನೀಡಿರುವ ನೋಟಿಸ್ ನಲ್ಲಿ ಸೂಚಿಸಲಾಗಿದ್ದು, ಮುಂದೆ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದನ್ನು ಕಾದುನೋಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...