ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಹೈದರಾಬಾದ್ ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ಈ ಭೇಟಿ ತೆಲಂಗಾಣ ಮುಖ್ಯಮಂತ್ರಿಗಳ ಅಧಿಕೃತ ಕಾರ್ಯಾಲಯ ಪ್ರಗತಿ ಭವನದಲ್ಲಿ ನಡೆಯಿತು.
ಹೌದು, ಇಂದು ಕರ್ನಾಟಕ ಮಾಜಿ ಸಿಎಂ, ಕೆಸಿಆರ್ ಭೇಟಿ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ. ಈ ಭೇಟಿಗೂ ಮೊದಲು ತೆಲಂಗಾಣದ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ಕೆ.ಟಿ.ರಾಮಾರಾವ್ ಅವರೊಂದಿಗೆ ಮಾತುಕತೆ ನಡೆಸಿದರು. ತೆಲಂಗಾಣ, ಕರ್ನಾಟಕ ಸೇರಿದಂತೆ ರಾಷ್ಟ್ರ ರಾಜಕಾರಣದ ಬಗ್ಗೆ ಸಮಾಲೋಚನೆ ನಡೆಸಿದರು.
ಇನ್ನು ತೆಲಂಗಾಣ ಸಿಎಂ ಭೇಟಿ ಅನೇಕ ಚರ್ಚೆಗಳನ್ನು ಹುಟ್ಟು ಹಾಕಿದೆ. ಅಷ್ಟೆ ಅಲ್ಲ ಪರ್ಯಾಯ ರಂಗವನ್ನು ಹುಟ್ಟು ಹಾಕೋದಿಕ್ಕೆ ಈ ಭೇಟಿ ಆಗಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಕಳೆದ ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿಗೆ ಆಗಮಿಸಿದ್ದ ಕೆಸಿಆರ್, ದೇವೇಗೌಡರ ಜೊತೆ ಮಾತುಕತೆ ನಡೆಸಿದ್ದರು. ಇದೀಗ ಹೆಚ್ ಡಿ ಕೆ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ.