ಜುಲೈ 18 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಸಂಸತ್ತಿನಲ್ಲಿ ಕೆಲ ಪದಗಳ ಬಳಕೆಯನ್ನು ನಿಷೇಧಿಸಿ ಎರಡು ದಿನಗಳ ಹಿಂದಷ್ಟೇ ಆದೇಶ ಹೊರಡಿಸಲಾಗಿತ್ತು. ಇದೀಗ ಅದರ ಮರುದಿನವೇ ಮತ್ತೊಂದು ಆದೇಶ ಹೊರ ಬಿದ್ದಿದೆ.
ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ, ಈ ಸುತ್ತೋಲೆ ಹೊರಡಿಸಿದ್ದು ಇನ್ನು ಮುಂದೆ ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ, ಧರಣಿ, ಉಪವಾಸ ಅಥವಾ ಧಾರ್ಮಿಕ ಸಮಾರಂಭಗಳನ್ನು ನಡೆಸುವಂತಿಲ್ಲ ಎಂದು ತಿಳಿಸಲಾಗಿದೆ.
ಕೇಂದ್ರ ಸರ್ಕಾರದ ಈ ನಡೆಗೆ ಪ್ರತಿಪಕ್ಷಗಳ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಸುತ್ತೋಲೆಯನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.