ನವದೆಹಲಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಐಟಿ ತನಿಖೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದು, ಪ್ರಜ್ವಲ್ ರೇವಣ್ಣಗೆ ಸಂಕಷ್ಟ ಎದುರಾಗಿದೆ.
ಪ್ರಜ್ವಲ್ ರೇವಣ್ಣ 15ನೇ ವಯಸ್ಸಿನಲ್ಲಿಯೇ 23 ಕೋಟಿ ಆಸ್ತಿ ಹೊಂದಿದ್ದರು ಆದಾಯ ತೆರಿಗೆ ಇಲಾಖೆಗೆ ಯಾವುದೇ ಮಾಹಿತಿ ಸಲ್ಲಿಸಿರಲಿಲ್ಲ. ಚುನಾವಣಾ ಆಯೋಗಕ್ಕೂ ತಪ್ಪು ಮಾಹಿತಿ ನೀಡಿದ್ದಾರೆ ಎನ್ನಲಾಗಿತ್ತು. ಅಲ್ಲದೇ ಬೇನಾಮಿ ಆಸ್ತಿ, ಗೋಮಾಳ ಭೂಮಿ ಕಬಳಿಕೆ ಆರೋಪ ಕೂಡ ಕೇಳಿಬಂದಿತ್ತು. ಆದರೆ ಹೈಕೋರ್ಟ್ ಪ್ರಜ್ವಲ್ ರೇವಣ್ಣಗೆ ಕ್ಲೀನ್ ಚಿಟ್ ನೀಡಿತ್ತು.
ಕದ್ದ ಯಂತ್ರದ ಪತ್ತೆಗಾಗಿ ಪೊಲೀಸರಿಂದ ಬರೋಬ್ಬರಿ 45 ಸಿಸಿ ಕ್ಯಾಮರಾಗಳ ಪರಿಶೀಲನೆ
ಹೈಕೊರ್ಟ್ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ವಿರುದ್ಧ ವಕೀಲ ದೇವರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ನ್ಯಾ.ಸಂಜಯ್ ಕಿಶನ್, ನ್ಯಾ.ಸುಂದರೇಶ್ ಪೀಠ ಇದೀಗ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಐಟಿ ತನಿಖೆಗೆ ಆದೇಶ ನೀಡಿದೆ.