alex Certify ಸಚಿವರ ಎದುರೇ ಬಿಜೆಪಿ ಕಾರ್ಯಕರ್ತರ ಮಾರಾಮಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವರ ಎದುರೇ ಬಿಜೆಪಿ ಕಾರ್ಯಕರ್ತರ ಮಾರಾಮಾರಿ

ಹಾಸನ: ವಿಧಾನ ಪರಿಷತ್ ಚುನಾವಣೆಗೆ ರಾಜಕೀಯ ನಾಯಕರಿಂದ ಭರ್ಜರಿ ಪ್ರಚಾರ ನಡೆದಿದೆ. ಈ ನಡುವೆ ಪ್ರಚಾರ ಸಭೆ ವೇಳೆ ಸಚಿವರ ಮುಂದೆಯೇ ಬಿಜೆಪಿ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದೆ.

ಹಾಸನ ಜಿಲ್ಲೆಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕೆ.ಗೋಪಾಲಯ್ಯ ಸಮ್ಮುಖದಲ್ಲಿ ಬಿಜೆಪಿ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಮೂಲ ಬಿಜೆಪಿಗರನ್ನು ಕಡೆಗಣಿಸಲಾಗುತ್ತಿದೆ ಎಂದು ಕೆಲ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಎನ್.ಆರ್.ಸಂತೋಷ್ ವಿರುದ್ಧ ಮೂಲ ಬಿಜೆಪಿ ಕಾರ್ಯಕರ್ತ ರಂಗನಾಥ್ ಬೆಂಬಲಿಗರು ಕಿಡಿಕಾರಿದ್ದಾರೆ. ಸಂತೋಷ್ ಅರಸಿಕೆರೆಯ ಮೂಲ ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ವೇಳೆ ಎನ್.ಆರ್.ಸಂತೋಷ್ ಹಾಗೂ ರಂಗನಾಥ್ ಬೆಂಬಲಿಗರ ನಡುವೆ ವಾಗ್ವಾದ ಆರಂಭವಾಗಿದ್ದು, ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಎದುರೇ ಈ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...