
ಚಿಕ್ಕಮಗಳೂರು: ಕೇಂದ್ರ ಸರ್ಕಾರದಿಂದ ನಮ್ಮ ಸಿಸ್ಟಮ್ ಹ್ಯಾಕ್ ಮಾಡಲಾಗಿದೆ. ಹಾಗಾಗಿ ಸರ್ವರ್ ಡೌನ್ ಆಗಿದೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದು, ಸಚಿವರ ಹೇಳಿಕೆ ಬೇರೆ ರೀತಿ ತಿರುಗಬಹುದು ಎಂದಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ. ರವಿ, ಸಚಿವ ಸತೀಶ್ ಜಾರಕಿಹೊಳಿ ಸರ್ವರ್ ಹ್ಯಾಕ್ ಹೇಳಿಕೆ ಬೇರೆ ರೀತಿ ತಿರುಗಬಹುದು. ಸಧ್ಯ ಅವರದ್ದು ಹುಚ್ಚುಚ್ಚು ಹೇಳಿಕೆಗಳು. ಇದರಲ್ಲಿ ವ್ಯತ್ಯಾಸವಿಲ್ಲ ಎಂದು ಕಿಡಿಕಾರಿದರು.
ಚುನಾವಣೆಗೆ ಅಂತಾ ಮೋದಿಯವರು ನೂರಾರು ಯೋಜನೆಗಳನ್ನು ಘೋಷಣೆ ಮಾಡಿಲ್ಲ, ಆದರೆ ಕಾಂಗ್ರೆಸ್ ನವರು ಚುನಾವಣೆ ಮೊದಲೇ ಡಂಗುರ ಬಾರಿಸಿದ್ರು. ಯೋಜನೆಗಳನ್ನು ಘೋಷಣೆ ಮಾಡಿದರು. ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಕೇಂದ್ರದಲ್ಲಿ ಬಿಜೆಪಿ ಇತ್ತು. ಆಗ ಮೋದಿ ಅಕ್ಕಿ ಕೊಟ್ಟರು ಎಂದು ಸಿದ್ದರಾಮಯ್ಯ ಹೇಳಿದ್ರಾ? ಆಗಲು ನಾನು ಅಕ್ಕಿ ಕೊಟ್ಟೆ ಅಂತಾನೇ ಸಿದ್ದರಾಮಯ್ಯ ಹೇಳಿದ್ರು ಎಂದು ವಾಗ್ದಾಳಿ ನಡೆಸಿದ್ದಾರೆ.