ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಕಾರಣರಾದ ಸಚಿವ ಈಶ್ವರಪ್ಪನವರನ್ನು ತಕ್ಷಣವೇ ಬಂಧಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈಶ್ವರಪ್ಪ ಅವರನ್ನು ತಕ್ಷಣ ಬಂಧಿಸದಿದ್ದರೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕಾಂಗ್ರೆಸ್ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕುಮಾರಕೃಪಾ ನಿವಾಸಕ್ಕೆ ಬ್ಯಾರಿಕೇಡ್ ಗಳನ್ನು ಹಾಕಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.
ಸಚಿವ ಈಶ್ವರಪ್ಪ ಅವರ ಬೆಂಗಳೂರಿನ ನಿವಾಸಕ್ಕೂ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.