alex Certify ಸಚಿವ ಈಶ್ವರಪ್ಪ ವಿರುದ್ಧ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಈಶ್ವರಪ್ಪ ವಿರುದ್ಧ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣು

ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಗುತ್ತಿಗೆ ಕಾಮಗಾರಿಗಳನ್ನು ಪಡೆಯಲು 40 ಪರ್ಸೆಂಟ್ ಕಮಿಷನ್ ಕೇಳಲಾಗುತ್ತಿದೆ ಎಂದು ಆರೋಪಿಸಿದ್ದ ಬಿಜೆಪಿ ಕಾರ್ಯಕರ್ತ ಸಂತೋಷ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕಾರಣ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಕಾಮಗಾರಿ ಮುಗಿಸಿ ಒಂದು ವರ್ಷ ಕಳೆದರೂ ಹಣ ಪಾವತಿ ಆಗಿರಲಿಲ್ಲ. ಇದಕ್ಕೆ ಈಶ್ವರಪ್ಪ ಅವರೇ ನೇರ ಕಾರಣ ಅವರು 40 ಪರ್ಸೆಂಟ್ ಕಮಿಷನ್ ಗೆ ಬೇಡಿಕೆ ಇಟ್ಟಿದ್ದರು ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಸಂತೋಷ್ ಆತ್ಮಹತ್ಯೆ ಖಂಡಿಸಿ ಪ್ರತಿಪಕ್ಷಗಳು ಸಚಿವ ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...